ಅಭಿಪ್ರಾಯ / ಸಲಹೆಗಳು

ಎಂ ಫಿಲ್ ಮತ್ತು ಪಿಹೆಚ್ ಡಿ ಫೆಲೋಶಿಫ್

ಎಂ ಫಿಲ್ ಮತ್ತು ಪಿ ಹೆಚ್ ಡಿ ಫೆಲೋಶಿಫ್

ಸರ್ಕಾರದ ಆದೇಶ ಸಂಖ್ಯೆ: ಎಂಡಬ್ಲ್ಯೂಡಿ 462 ಎಂಡಿಎಸ್ 2016 ಬೆಂಗಳೂರು ದಿನಾಂಕ: 24.01.2017ರ ಮತ್ತು ಎಂಡಬ್ಲ್ಯೂಡಿ 157 ಎಂಡಿಎಸ್ 2017 ದಿನಾಂಕ: 09.05.2017ರ ಆದೇಶಗಳಲ್ಲಿ ಅಲ್ಪಸಂಖ್ಯಾತರ ವಿಷಯಗಳ ಬಗ್ಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಿ ಇತರೆ ವಿಷಯಗಳನ್ನು ಪರಿಗಣಿಸಲಾಗುವುದು. ವಿಶ್ವ ವಿದ್ಯಾನಿಲಯಗಳಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತರ ಸಮುದಾಯಗಳ (ಮುಸ್ಲಿಂ, ಕ್ರಿಶ್ಚಿಯನ್ ಸಿಖ್, ಪಾರ್ಸಿ, ಬೌದ್ದ ಮತ್ತು ಜೈನ) ವಿದ್ಯಾರ್ಥಿಗಳಿಗೆ 3 ವರ್ಷ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ 2 ವರ್ಷಗಳ ಅವಧಿಗೆ ಮಾತ್ರ ಪ್ರತಿ ಮಾಹೆಯಾನ ರೂ. 25,000/-ಗಳನ್ನು ಮತ್ತು ಪ್ರತಿ ವರ್ಷಕ್ಕೆ ಒಂದು ಬಾರಿಗೆ ರೂ. 10,000/-ಗಳ ನಿರ್ವಹಣಾ ವೆಚ್ಚವನ್ನು ಫೆಲೋಶಿಫ್ ಮೂಲಕ ನೀಡಲು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಿದೆ.

  ಷರತ್ತುಗಳು:-

  1. ಕಡ್ಡಾಯವಾಗಿ ಕರ್ನಾಟಕ ರಾಜ್ಯ ನಿವಾಸಿಯಾಗಿರಬೇಕು.
  2. ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು.
  3. ಅಲ್ಪಸಂಖ್ಯಾತರ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ತಹಶೀಲ್ದಾರರಿಂದ ಪಡೆದಿರಬೇಕು.
  4. ವಾರ್ಷಿಕ ವರಮಾನ ರೂ.6.00 ಲಕ್ಷ ಮೀರಿರಬಾರದು.
  5. ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಯು.ಜಿ.ಸಿ-ನೆಟ್, ಯು.ಜಿ.ಸಿ-ಸಿ.ಎಸ್.ಐ.ಆರ್-ನೆಟ್, ಮೌಲಾನಾ ಆಜಾದ್ ನ್ಯಾಷನಲ್ ಫೆಲೋಶಿಫ್ ಇತರೆ ಮೂಲಕ ಫೆಲೋಶಿಪ್ ಪೆಡಯುತ್ತಿರಬಾರದು.

 

  • ಅರ್ಜಿಯನ್ನು ಆನ್-ಲೈನ್ ನಲ್ಲಿ ಸಲ್ಲಿಸಿ, ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ನಿರ್ದೇಶಕರ ಕಾರ್ಯಾಲಯಕ್ಕೆ ಸಲ್ಲಿಸುವುದು.

ಇತ್ತೀಚಿನ ನವೀಕರಣ​ : 05-08-2021 01:37 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080