ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ಜಿಲ್ಲೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ಜಿಲ್ಲೆ

ಕರ್ನಾಟಕ ಸರ್ಕಾರ

#

#

×
ಅಭಿಪ್ರಾಯ
ವಿದ್ಯಾಸಿರಿ ವಿದ್ಯಾರ್ಥಿವೇತನ

:: 2022-23 ನೇ ಸಾಲಿಗೆ ವಿದ್ಯಾಸಿರಿ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ ::

 

 ಮೊದಲನೇ ಸುತ್ತಿನ ಆಯ್ಕೆ ಪಟ್ಟಿ

 

2021-22 ನೇ ಸಾಲಿಗೆ ವಿದ್ಯಾಸಿರಿ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ

 

(ಮೊದಲನೇ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ)

 

(ಎರಡನೇ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ)

 

(ಮೂರನೇ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ)

 

(ನಾಲ್ಕನೇ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ)

:: ವಿದ್ಯಾಸಿರಿ ಯೋಜನೆ ::

 

ಯೋಜನೆಯ ಉದ್ದೇಶ :

ಯಾವುದೇ ಇಲಾಖೆಯ ಸರ್ಕಾರಿ/ಸರ್ಕಾರಿ ಅನುದಾನಿತ ವಿದ್ಯಾರ್ಥಿ ನಿಲಯ/ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದೆ ಇರುವ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ, ಭೌದ್ದರು, ಸಿಖ್ಖರು ಹಾಗೂ ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ಪ್ರತಿ ತಿಂಗಳಿಗೆ ರೂ. 1,500/- ರಂತೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಅನ್‍ಲೈನ್ ಮುಖಾಂತರ ಮೊತ್ತವನ್ನು ಜಮಾ ಮಾಡಲಾಗುವುದು.

ಅರ್ಹತೆ :

  1. ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
  2. ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ, ಭೌದ್ದರು, ಸಿಖ್ಖರು ಹಾಗೂ ಪಾರ್ಸಿ) ಸಮುದಾಯಕ್ಕೆ ಸೇರಿರಬೇಕು.
  3. ಕರ್ನಾಟಕ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ/ಸ್ಥಳೀಯ ಸಂಸ್ಥೆ/ಅನುದಾನಿತ ಸಂಸ್ಥೆಗಳು/ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
  4. ಈ ಮೇಲಿನ ಸೌಲಭ್ಯ ಪಡೆಯಲು ವಿದ್ಯಾರ್ಥಿಯ ತಂದೆ-ತಾಯಿ/ಪೋಷಕರ ಕುಟುಂಬದ ಒಟ್ಟು ವಾರ್ಷಿಕ ವರಮಾನವು ಅಲ್ಪಸಂಖ್ಯಾತರಿಗೆ ರೂ.2.00 ಲಕ್ಷ ಗಳನ್ನು ನಿಗಧಿಪಡಿಸಿಸಲಾಗಿದೆ.
  5. ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ ದೂರದವರಾಗಿರಬೇಕು. ಆದರೆ, ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ/ಪಟ್ಟಣ ಆಗಿದ್ದು, ಅವರು ಬೇರೆ ನಗರ/ಪಟ್ಟಣದಲ್ಲಿರುವ ಕಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ (ಒಂದೇ ನಗರದ ವ್ಯಾಪ್ತಿಯಲ್ಲಿ ಇರುವವರು ಅರ್ಹರಿರುವುದಿಲ್ಲ).
  6. ಈ ಯೋಜನೆಯಡಿ ಪ್ರಥಮ ಬಾರಿಗೆ ಸೌಲಭ್ಯವನ್ನು ಪಡೆಯಲು ಹಿಂದನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  7. ಈ ಯೋಜನೆಯಡಿ ಸಹಾಯಧನ ಆಯಾ ವರ್ಷಕ್ಕೆ ಲಭ್ಯವಿರುವ ಅನುದಾನ ಹಾಗೂ ಭೌತಿಕ ಗುರಿಗೆ ತಕ್ಕಂತೆ ಸ್ವೀಕೃತವಾದ ಅರ್ಹ ಅರ್ಜಿಗಳಲ್ಲಿ ಪಡೆದ ಅಂಕ/ಕೋರ್ಸುಗಳ ಆಧಾರದ ಮೇಲೆ ಮಂಜೂರು ಮಾಡಲಾಗುವುದು.
  8. ಮುಕ್ತ ವಿಶ್ವವಿದ್ಯಾಲಯ/ದೂರ ಶಿಕ್ಷಣ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
  9. ಸದರಿ ಯೋಜನೆಯಡಿ ತಪ್ಪು ಮಾಹಿತಿ ನೀಡಿ ಅಥವಾ ಸರ್ಕಾರಿ/ಖಾಸಗಿ (ಅನುದಾನಿತ) ವಸತಿ ನಿಲಯಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆದಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು, ಪಡೆದಿರುವ ಎಲ್ಲಾ ಮೊತ್ತವನ್ನು ಬಡ್ಡಿ ಸಮೇತ ವಸೂಲಿ ಮಾಡಲಾಗುವುದು. 

ಷರತ್ತುಗಳು :


01. ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ವಿದ್ಯಾಸಿರಿಯಡಿಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ದಾಖಲಾತಿ ನೀಡಲಾಗುವುದು. ತಮ್ಮ ವ್ಯಾಪ್ತಿಯಲ್ಲಿ ಇರುವ ಎಲ್ಲಾ ವಿದ್ಯಾರ್ಥಿನಿಲಯಗಳು ಭರ್ತಿ ಆದ ನಂತರ ಆ ಅರ್ಜಿಗಳನ್ನು ವಿದ್ಯಾಸಿರಿ ಯೋಜನೆಯಡಿಯಲ್ಲಿ ಮಂಜೂರು ಮಾಡಲು ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ನಿಯಮಾನುಸಾರ ಕ್ರಮಕೈಗೊಳ್ಳಲು ಸೂಚಿಸಿದೆ.


02. ವಿದ್ಯಾರ್ಥಿನಿಲಯಗಳಿಗೆ ಮಂಜೂರಾದ ಸಂಖ್ಯಾಬಲಕ್ಕೆ ತಕ್ಕಂತೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳನ್ನು ಭರ್ತಿ ಮಾಡಿ ನಂತರದ ಹೆಚ್ಚುವರಿ ಅರ್ಜಿಗಳನ್ನು ಮಾತ್ರ ವಿದ್ಯಾಸಿರಿ ಯೋಜನೆಯಡಿ ಪರಿಗಣಿಸಿಲು ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ನಿಯಮಾನುಸಾರ ಕ್ರಮಕೈಗೊಳ್ಳಲು ಸೂಚಿಸಿದೆ.


03. 2021-22 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸಿ, ಸ್ಥಳವಕಾಶವಿಲ್ಲದೇ ಬಾಕಿ ಇರುವ ಅರ್ಜಿಗಳಿಗೆ ಮೊದಲು ಆಧ್ಯತೆ ನೀಡಿ ಅನುದಾನ ಬಿಡುಗಡೆ ಮಾಡುವುದು,