a

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ವಿಜಯಪುರ

MINORITY WELFARE DEPARTMENT VIJAYAPURA

Government of Karnataka

×
Feedback
Chief Ministers Minority Development Schemes

ಮುಖ್ಯಮಂತ್ರಿಯವರ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆ

      ಅಲ್ಪಸಂಖ್ಯಾತರಿಗಾಗಿ ಮುಖ್ಯಮಂತ್ರಿಯವರು ಅಭಿವೃದ್ಧಿ ಯೋಜನೆಯನ್ನು ಬಹುವಲಯವಾರು ಅಭಿವೃದ್ಧಿ ಯೋಜನೆಯ ಮಾದರಿಯಲ್ಲಿ ನಿರ್ಮಿಸಲಾಗಿರುತ್ತದೆ. ಈ ಯೋಜನೆಯಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳು ನಮೂದಿಸಿದೆ.

                ಕೇಂದ್ರ ಸರ್ಕಾರದ ಬಹುವಲಯವಾರು ಅಭಿವೃದ್ಧಿ ಯೋಜನೆ ಮಾದರಿಯಲ್ಲಿ ರಾಜ್ಯದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಉರ್ದು ಪ್ರಾಥಮಿಕ/ಪ್ರೌಢ ಶಾಲೆಗಳ ಕೊಠಡಿಗಳು ಹಾಗೂ ಶೌಚಾಲಯ ನಿರ್ಮಾಣ, ಸರ್ಕಾರಿ ಉರ್ದು ಪ್ರಾಥಮಿಕ/ಪ್ರೌಢ ಶಾಲೆಗಳಿಗೆ ಇ-ಲರ್ನಿಂಗ್ ಸ್ಮಾರ್ಟ್ ಕ್ಲಾಸ್ ಸಾಧನಗಳ ಅಳವಡಿಕೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ Construction of Multipurpose Hall/Computer Class Room ಕಾಮಗಾರಿ ಮೂಲಭೂತ ಸೌಕರ್ಯ ಕಲ್ಪಿಸಲು, ಶಿಕ್ಷಣ, ಆರೋಗ್ಯ ಹಾಗೂ ಕೌಶಲ್ಯ ತರಬೇತಿಗಾಗಿ ಈ ಯೋಜನೆಯಡಿ ಅನುದಾನ ಒದಗಿಸಲಾಗಿದೆ.

 

ಅಲ್ಪಸಂಖ್ಯಾತ ಸಮುದಾಯದ ಬಹುಪಾಲು ಜನಸಂಖ್ಯೆ ವಾಸವಾಗಿರುವ ಕಾಲೋನಿ, ಮೊಹಲ್ಲಾ ಮತ್ತು ಪ್ರದೇಶಗಳಲ್ಲಿ ರಸ್ತೆ, ಚರಂಡಿ, ನೀರು ಸರಬರಾಜು, ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುತ್ತಾರೆ. ಇಂತಹ ಕಾಲೋನಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ ಇಲ್ಲಿ ವಾಸಿಸುತ್ತಿರುವ ಜನರಿಗೆ ಆರೋಗ್ಯಕರ ವಾತಾವರಣ, ಜೀವನಶೈಲಿ ಸುಧಾರಣೆಗೆ ಅನುಕೂಲವಾಗುವಂತೆ ಮಾನ್ಯ ಮುಖ್ಯಮಂತ್ರಿಗಳು 2016-17ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಹೊಸ ಯೋಜನೆಯನ್ನು ಘೋಷಿಸಿರುತ್ತಾರೆ. ಸದರಿ ಯೊಜನೆ ಅನುಷ್ಠಾನಗೊಳಿಸಲು ಅನುದಾನ ಒದಗಿಸಲಾಗಿದೆ.

               

2020-21ನೇ ಸಾಲಿನಲ್ಲಿ 10 ಮಹಾನಗರ ಪಾಲಿಕೆ ಹೊಂದಿರುವ ಜಿಲ್ಲೆಯ ನಗರ ವ್ಯಾಪ್ತಿಯಲ್ಲಿನ Notified & Non Notified ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿದ್ದು, ಪ್ರಮುಖ ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಸ್ಥಳಗಳಲ್ಲಿ ಇದೊಂದು ವಿಶೇಷ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸಲು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಅನುಷ್ಠಾನಗೊಳಿಸಲಾಗುವುದು.