a

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ವಿಜಯಪುರ

MINORITY WELFARE DEPARTMENT VIJAYAPURA

Government of Karnataka

×
Feedback
Incentive for B Ed and D Ed Students

 

   ಪ್ರಸಕ್ತ ಸಾಲಿನಿಂದ ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಿ.ಎಡ್/ಡಿ.ಎಡ್‌. ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಇಲಾಖೆಯಿಂದ ವಾರ್ಷಿಕ ರೂ 25,000 ಪ್ರೋತ್ಸಾಹ ಧನ ನೀಡಲಾಗುತ್ತದೆ. ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ದಾಖಲೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಛೇರಿಗೆ ಸಲ್ಲಿಸಬೇಕು.

 

-->ಷರತ್ತುಗಳು :

 

  1. ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು.

  2. ಬಿ.ಎಡ್ ಮತ್ತು ಡಿ.ಎಡ್ ಕೋರ್ಸುಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ (ಗರಿಷ್ಠ 2 ವರ್ಷ) ಅನುದಾನವನ್ನು ನೀಡಲಾಗುವುದು.

  3. ಅಲ್ಪಸಂಖ್ಯಾತರ ಅಭ್ಯರ್ಥಿಗಳ ಪೋಷಕರ ವಾರ್ಷಿಕ ವರಮಾನ ಗರಿಷ್ಠ ರೂ. 6.00 ಲಕ್ಷಕ್ಕೆ ಮೀರಿರಬಾರದು.

  4. ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡತಕ್ಕದ್ದು.

  5. ಸದರಿ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಕನಿಷ್ಠ 50% ರಷ್ಟು ಅಂಕಗಳನ್ನು ಪಡೆದಿರತಕ್ಕದ್ದು. ಉತ್ತೀರ್ಣರಾಗದ ಅಭ್ಯರ್ಥಿಗಳು ಈ ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ಅರ್ಹ ಇರುವುದಿಲ್ಲ.

  6. ಸುಳ್ಳು ಮಾಹಿತಿ, ದಾಖಲಾತಿ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಧನ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೀಡಲಾದ ಪ್ರೋತ್ಸಾಹಧನ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಿಂದಿರುಗಿಸತಕ್ಕದ್ದು.

  7. ಈ ಯೋಜನೆಯಡಿ ಪ್ರೋತ್ಸಾಹಧನ ಪಡೆದ ವಿದ್ಯಾರ್ಥಿಗಳು ಡಿ.ಎಡ್ ಮತ್ತು ಬಿ.ಎಡ್ ಕೋರ್ಸ ಪೂರ್ಣಗೊಳಿಸದೇ ಮಧ್ಯದಲ್ಲಿ ಬಿಟ್ಟು ಹೋದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ವಿಚಾರಣೆ ನಡೆಸಿ ಇಲಾಖೆಯ ಮುಖ್ಯಸ್ಥರಿಗೆ ವರದಿ ಸಲ್ಲಿಸತಕ್ಕದ್ದು. ಅಂತಹ ಪ್ರಕರಣಗಳಲ್ಲಿ ಪರಿಶೀಲಿಸಿ ಇಲಾಖಾ ಮುಖ್ಯಸ್ಥರು ಅಂತಿಮ ನಿರ್ಣಯ ತೆಗೆದುಕೊಳ್ಳತಕ್ಕದ್ದು. ಒಂದು ಪಕ್ಷ ಸಮಂಜಸವಾದ ಕಾರಣವಿಲ್ಲದಿದ್ದಲ್ಲಿ ಸಂಬಂಧಪಟ್ಟ ಅಭ್ಯರ್ಥಿಗಳಿಗೆ ನೀಡಲಾದ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಿಂದಿರುಗಿಸತಕ್ಕದ್ದು.

   

      -->>>>ಬಿ. ಎಡ್. ಮತ್ತು ಡಿ. ಎಡ್.‌ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ.