ಅಭಿಪ್ರಾಯ / ಸಲಹೆಗಳು

ಮುಖ್ಯಮಂತ್ರಿಯವರ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆ

ಮುಖ್ಯಮಂತ್ರಿಯವರ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆ

      ಅಲ್ಪಸಂಖ್ಯಾತರಿಗಾಗಿ ಮುಖ್ಯಮಂತ್ರಿಯವರು ಅಭಿವೃದ್ಧಿ ಯೋಜನೆಯನ್ನು ಬಹುವಲಯವಾರು ಅಭಿವೃದ್ಧಿ ಯೋಜನೆಯ ಮಾದರಿಯಲ್ಲಿ ನಿರ್ಮಿಸಲಾಗಿರುತ್ತದೆ. ಈ ಯೋಜನೆಯಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳು ನಮೂದಿಸಿದೆ.

                ಕೇಂದ್ರ ಸರ್ಕಾರದ ಬಹುವಲಯವಾರು ಅಭಿವೃದ್ಧಿ ಯೋಜನೆ ಮಾದರಿಯಲ್ಲಿ ರಾಜ್ಯದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಉರ್ದು ಪ್ರಾಥಮಿಕ/ಪ್ರೌಢ ಶಾಲೆಗಳ ಕೊಠಡಿಗಳು ಹಾಗೂ ಶೌಚಾಲಯ ನಿರ್ಮಾಣ, ಸರ್ಕಾರಿ ಉರ್ದು ಪ್ರಾಥಮಿಕ/ಪ್ರೌಢ ಶಾಲೆಗಳಿಗೆ ಇ-ಲರ್ನಿಂಗ್ ಸ್ಮಾರ್ಟ್ ಕ್ಲಾಸ್ ಸಾಧನಗಳ ಅಳವಡಿಕೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ Construction of Multipurpose Hall/Computer Class Room ಕಾಮಗಾರಿ ಮೂಲಭೂತ ಸೌಕರ್ಯ ಕಲ್ಪಿಸಲು, ಶಿಕ್ಷಣ, ಆರೋಗ್ಯ ಹಾಗೂ ಕೌಶಲ್ಯ ತರಬೇತಿಗಾಗಿ ಈ ಯೋಜನೆಯಡಿ ಅನುದಾನ ಒದಗಿಸಲಾಗಿದೆ.

 

 • ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಕರ್ಯ:

ಅಲ್ಪಸಂಖ್ಯಾತ ಸಮುದಾಯದ ಬಹುಪಾಲು ಜನಸಂಖ್ಯೆ ವಾಸವಾಗಿರುವ ಕಾಲೋನಿ, ಮೊಹಲ್ಲಾ ಮತ್ತು ಪ್ರದೇಶಗಳಲ್ಲಿ ರಸ್ತೆ, ಚರಂಡಿ, ನೀರು ಸರಬರಾಜು, ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುತ್ತಾರೆ. ಇಂತಹ ಕಾಲೋನಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ ಇಲ್ಲಿ ವಾಸಿಸುತ್ತಿರುವ ಜನರಿಗೆ ಆರೋಗ್ಯಕರ ವಾತಾವರಣ, ಜೀವನಶೈಲಿ ಸುಧಾರಣೆಗೆ ಅನುಕೂಲವಾಗುವಂತೆ ಮಾನ್ಯ ಮುಖ್ಯಮಂತ್ರಿಗಳು 2016-17ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಹೊಸ ಯೋಜನೆಯನ್ನು ಘೋಷಿಸಿರುತ್ತಾರೆ. ಸದರಿ ಯೊಜನೆ ಅನುಷ್ಠಾನಗೊಳಿಸಲು ಅನುದಾನ ಒದಗಿಸಲಾಗಿದೆ.

               

 • ಮಾನ್ಯ ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಮೂಲಭೂತ ಸೌಕರ್ಯ (ಕಾಲೋನಿ ಅಭಿವೃದ್ಧಿ) :

2020-21ನೇ ಸಾಲಿನಲ್ಲಿ 10 ಮಹಾನಗರ ಪಾಲಿಕೆ ಹೊಂದಿರುವ ಜಿಲ್ಲೆಯ ನಗರ ವ್ಯಾಪ್ತಿಯಲ್ಲಿನ Notified & Non Notified ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿದ್ದು, ಪ್ರಮುಖ ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಸ್ಥಳಗಳಲ್ಲಿ ಇದೊಂದು ವಿಶೇಷ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸಲು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಅನುಷ್ಠಾನಗೊಳಿಸಲಾಗುವುದು.

 • ರಸ್ತೆ ಮತ್ತು ಚರಂಡಿ/ಒಳಚರಂಡಿ ನಿರ್ಮಾಣ.
 • ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು.
 • ಅಗತ್ಯವಿದ್ದಲ್ಲಿ ಕೊಳವೆ ಬಾವಿ ಕೊರೆಯುವುದು.
 • ಅಗತ್ಯವಿದ್ದಲ್ಲಿ ಸಾಮೂಹಿಕ ಶೌಚಾಲಯಗಳ ನಿರ್ಮಾಣ (ನಿರ್ಮಾಣದ ನಂತರ ನಿರ್ವಹಣೆ ಸ್ಥಳೀಯ ಸಂಸ್ಥೆಯ ಸುಪರ್ದಿಗೆ ನೀಡುವುದು)

 

ಇತ್ತೀಚಿನ ನವೀಕರಣ​ : 29-06-2021 07:27 PM ಅನುಮೋದಕರು: DISTRICT OFFICER


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080