ಅಭಿಪ್ರಾಯ / ಸಲಹೆಗಳು

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು

 

     ಅಲ್ಪಸಂಖ್ಯಾತರ ನಿರ್ದೇಶನಾಲಯದ ವ್ಯಾಪ್ತಿಯಲ್ಲಿ ರಾಜ್ಯಾದ್ಯಾಂತ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು 19 ಬಾಲಕರ ಹಾಗೂ 28 ಬಾಲಕಿಯರ ಒಟ್ಟು 47 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ ವಿಜಯಪುರ ಜಿಲ್ಲೆಯಲ್ಲಿ 04 ಮೆಟ್ರಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳು ಕಾರ್ಯನಿರ್ವಹಿಸುತ್ತಿವೆ.

 

ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಕೆಳಕಂಡ ಸವಲತ್ತುಗಳನ್ನು ನೀಡಲಾಗುತ್ತಿದೆ.

 

 • ಪ್ರತಿ ವಿದ್ಯಾರ್ಥಿಗೆ ಮಾಹೆಯಾನ ರೂ. 1,500/-ರ ವೆಚ್ಚದಲ್ಲಿ 10 ತಿಂಗಳ ಅವಧಿಗೆ ಆಹಾರ ನೀಡಿಕೆ.

 • ಉಚಿತ ವಸತಿ ಸೌಲಭ್ಯ

 • ಪ್ರತಿ ವಿದ್ಯಾರ್ಥಿಗೆ ರೂ. 1,000/-ವೆಚ್ಚದಲ್ಲಿ ಎರಡು ಜೊತೆ ಸಮವಸ್ತ್ರ ಪೂರೈಕೆ.

 • ಪ್ರತಿ ವಿದ್ಯಾರ್ಥಿಗೆ ಉಚಿತ 10 ತಿಂಗಳ ಅವಧಿಗೆ ಇತರೆ ವೆಚ್ಚ.

 • ಪ್ರತಿ ಬಾಲಕ ವಿದ್ಯಾರ್ಥಿಗೆ ಎರಡು ತಿಂಗಳಿಗೊಮ್ಮೆ ರೂ. 60/-ರಂತೆ ಕ್ಷೌರದ ವೆಚ್ಚ ನೀಡಿಕೆ (5 ಬಾರಿ ಮಾತ್ರ)

 • ಪ್ರತಿ ವಿದ್ಯಾರ್ಥಿಗೆ ರೂ. 400/-ರ ವೆಚ್ಚದಲ್ಲಿ ವರ್ಷಕ್ಕೆ ಪಠ್ಯ ಪುಸ್ತಕ ಮತ್ತು ಲೇಖನ ಸಾಮಗಿ ನೀಡಿಕೆ.

 • ಪ್ರತಿ ವಿದ್ಯಾರ್ಥಿನಿಲಯಕ್ಕೆ ಉಚಿತ 10 ತಿಂಗಳ ಅವಧಿಗೆ ವೈದ್ಯಕೀಯ ವೆಚ್ಚ ನೀಡಿಕೆ.

 • ಪ್ರತಿ ವಿದ್ಯಾರ್ಥಿಗೆ ಉಚಿತ ಹಾಸಿಗೆ ಹೊದಿಕೆ ಸರಬರಾಜು

 • ಕ್ರೀಡಾ ಸಾಮಗ್ರಿಗಳು ಪ್ರತಿ ವರ್ಷಕ್ಕೊಮ್ಮೆ ಪ್ರತಿ ನಿಲಯಕ್ಕೆ ನೀಡಲಾಗುವುದು.

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅನುಸರಿಸುವ ಮಾನದಂಡಗಳು :

 

 • ವಿದ್ಯಾರ್ಥಿಗಳು ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ್ದು ರಾಜ್ಯದ ನಿವಾಸಿಯಾಗಿರಬೇಕು.

 • ವಿದ್ಯಾರ್ಥಿಗಳು ಸರ್ಕಾರಿ ಅಥವಾ ಅಂಗೀಕೃತ ಶಾಲೆಗಳಲ್ಲಿ ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು.

 • ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ರೂ. 44,500/-ಗಳು ಹಾಗೂ ಪ್ರವರ್ಗ-1ಕ್ಕೆ ರೂ. 1.00 ಲಕ್ಷಕ್ಕೆ ಮೀರಬಾರದು.

 • ಪ್ರತಿ ವಿದ್ಯಾರ್ಥಿನಿಲಗಳಲ್ಲಿ ಶೇ. 75 ರಷ್ಟು ಸ್ಥಾನಗಳನ್ನು ಅಲ್ಪಸಂಖ್ಯಾತರ ಜನಾಂಗದ ವಿದ್ಯಾರ್ಥಿಗಳಿಗೆ ಹಾಗೂ ಶೇ. 25 ರಷ್ಟು ಸ್ಥಾನಗಳನ್ನು ಹಿಂದುಳಿದ ವರ್ಗಗಳ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುವುದು.

 • ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆಯುವ ಅಭ್ಯರ್ಥಿಗಳು ತಮ್ಮ ಹಿಂದಿನ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯದಲ್ಲಿ ಉತ್ತೀರ್ಣರಾಗಿರಬೇಕು.

 • ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ನಿಯಮಾನುಸಾರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದು.

ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಹೆಸರು ಮತ್ತು ವಿಳಾಸ

 

ಕ್ರ.ಸಂ

ತಾಲ್ಲೂಕು

ವಿದ್ಯಾರ್ಥಿ ನಿಲಯಗಳ ಹೆಸರು ಮತ್ತು ವಿಳಾಸ

ಮಂಜೂರಾತಿ ಸಂಖ್ಯೆ

ಬಾಲಕರ/

ಕಿಯರ

 

ಮೆಲ್ವೀಚಾರಕರ ಹೆಸರು ಮತ್ತು ಮೊಬೈಲ ಸಂಖ್ಯೆ

01

ವಿಜಯಪುರ

ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ಟೇಕಡೆಗಲ್ಲಿ, ಮನಗೂಳಿ ರೋಡ್, ವಿಜಯಪುರ

50

ಬಾಲಕಿಯರ

ಶ್ರೀ ಎಸ್.‌ ಎ. ಜಮಾದಾರ 

(ಪ್ರಭಾರ)

9448986236

02

ಬಸವನ ಬಾಗೇವಾಡಿ

ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ನಿಡಗುಂದಿ.

50

ಬಾಲಕರ

ಶ್ರೀ ಸದಾಶಿವ ಕನಸೆ (ಪ್ರಭಾರ)

7619685635

03

ಇಂಡಿ

ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಇಂಚಗೇರಿ.

50

ಬಾಲಕರ

ಶ್ರೀ ಸಾಹೇಬಗೌಡ ಪಾಟೀಲ (ಪ್ರಭಾರ)

9844458077

04

ಮುದ್ದೇಬಿಹಾಳ

ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಮಾರುತಿ ನಗರ, ಮುದ್ದೇಬಿಹಾಳ

50

ಬಾಲಕರ

ಶ್ರೀ ಶಿವಗುಂಡಪ್ಪ ಶಿರಸಗಿ

7259919044

 

ಇತ್ತೀಚಿನ ನವೀಕರಣ​ : 11-08-2021 05:08 PM ಅನುಮೋದಕರು: DISTRICT OFFICER


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080