ಅಭಿಪ್ರಾಯ / ಸಲಹೆಗಳು

ಮೆರಿಟ್-ಕಮ್-ಮೀನ್ಸ್ ಆಧಾರಿತ ವಿದ್ಯಾರ್ಥಿ ವೇತನ (NSP and SSP)

ಮೆರಿಟ್-ಕಮ್-ಮೀನ್ಸ್ ಆಧಾರಿತ ವಿದ್ಯಾರ್ಥಿ ವೇತನ:

    ತಾಂತ್ರಿಕ ಹಾಗೂ ವೃತ್ತಿಪರ (Engineering, Medical, Unani, Ayurvedic, and Veterinary Subjects etc..) ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುತ್ತಾರೆ.

 

ಷರತ್ತುಗಳು :

 1. ವಿದ್ಯಾರ್ಥಿಗಳು ಅವರ ವಿದ್ಯಾರ್ಥಿವೇತನದ ಅರ್ಜಿಯನ್ನು ಆನ್ ಲೈನ್ ನಲ್ಲಿಯೇ ಸಲ್ಲಿಸಬೇಕು.
 2. ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. (ಹೊರ ರಾಜ್ಯಗಳಿಂದ ಬಂದು ಕರ್ನಾಟಕ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಹರಾಗಿರುವುದಿಲ್ಲ.)
 3. ವಿದ್ಯಾರ್ಥಿಗಳು ಸರ್ಕಾರದಿಂದ ಅನುಮತಿ ಪಡೆದ ಕಾಲೇಜುಗಳಲ್ಲಿ ಓದುತ್ತಿರುವವರಾಗಿರಬೇಕು.
 4. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಮೀರಿರಬಾರದು.
 5. ಹಿಂದಿನ ವರ್ಷದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ (Backlog) ಇರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ಪಡೆಯುವ ಅವಕಾಶವಿರುವುದಿಲ್ಲ.
 6. ಶೇಕಡ 30% ರಷ್ಟು ವಿದ್ಯಾರ್ಥಿವೇತನವನ್ನು ಬಾಲಕಿಯರಿಗಾಗಿ ಮೀಸಲಿರಿಸಲಾಗಿದೆ.
 7. ಮಂಜೂರಾದ ವಿದ್ಯಾರ್ಥಿವೇಥನವನ್ನು ವಿದ್ಯಾರ್ಥಿಯ ಬ್ಯಾಂಕಿನ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು.

 

ಯಾದಗಿರಿ ಜಿಲ್ಲೆಯ ಮೆರಟ್ ಕಂ ಮೀನ್ಸ್ ವಿದ್ಯಾರ್ಥಿವೇತನದ ವಿವರ.

ಕ್ರ. ಸಂ.

ವರ್ಷ

ಕರ್ನಾಟಕ ಸರ್ಕಾರ

ಭಾರತ ಸರ್ಕಾರ

ಆಯ್ಕೆಯಾದ ವಿದ್ಯಾರ್ಥಿಗಳ ಸಂಖ್ಯೆ

ಬಿಡುಗಡೆಯಾದ ಮೊತ್ತ

ಆಯ್ಕೆಯಾದ ವಿದ್ಯಾರ್ಥಿಗಳ ಸಂಖ್ಯೆ

ಬಿಡುಗಡೆಯಾದ ಮೊತ್ತ

1.

2017-18

260

65,63,445

87

23,84,240

2.

2018-19

147

34,63,600

196

50,72,655

3.

2019-20

31

5,41,060

286

77,36,491

4.

2020-21

ಪ್ರಗತಿಯಲ್ಲಿರುತ್ತದೆ.

167

45,17,461

 

 

ಇತ್ತೀಚಿನ ನವೀಕರಣ​ : 16-08-2021 06:46 PM ಅನುಮೋದಕರು: RAJUಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಾದಗಿರಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080