ಅಭಿಪ್ರಾಯ / ಸಲಹೆಗಳು

ವಿದ್ಯಾಸಿರಿ

 

 

ಷರತ್ತುಗಳು / ಅರ್ಹತೆ:

 

1)            ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯಕ್ಕೆ ಸೇರಿರಬೇಕು.

2)            ಅಂತರ ದೃಢೀಕರಣ ಪತ್ರ ಮತ್ತು ಆಧಾರ ಕಾರ್ಡ ಲಗತ್ತಿಸತಕ್ಕದ್ದು.

3)            ವಿದ್ಯಾರ್ಥಿಗಳು (i) ವಿದ್ಯಾರ್ಥಿನಿಲಯದಲ್ಲಿ ಪ್ರವೇಶ, (ii) ವಿದ್ಯಾಸಿರಿ – ಊಟ ಮತ್ತು ವಸತಿ ಸಹಾಯ ಯೋಜನೆ ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.

4)            ಕರ್ನಾಟಕ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ/ಸ್ಥಳೀಯ ಸಂಸ್ಥೆ, ಅನುದಾನಿತ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ (ತಾಂತ್ರಿಕ ಮತ್ತು ವೈದ್ಯಕೀಯ ಕೋರ್ಸ್‍ಗಳು ಸೇರಿದಂತೆ) ವ್ಯಾಸಂಗ ಮಾಡುತ್ತೀರುವ ವಿದ್ಯಾರ್ಥಿಗಳಾಗಿರಬೇಕು.

5)            ಈ ಮೇಲಿನ ಸೌಲಭ್ಯ ಪಡೆಯಲು ವಿದ್ಯಾರ್ಥಿಯ, ತಂದೆ-ತಾಯಿ/ಪೋಷಕರ ಕುಟುಂಬದ, ಒಟ್ಟು ವಾರ್ಷಿಕ ವರಮಾನ (ಉಡಿoss ಂಟಿಟಿuಚಿಟ Iಟಿಛಿome) ಈ ಕೆಳಗೆ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.

ಚಿ)           ಪ್ರವರ್ಗ-1ರ (ನದಾಫ್, ಪಿಂಜಾರ, ದರವೇಶ್, ಚಪ್ಪರಬಂದ್, ಕಸಾಬ, ಪೂಲ್ ಮಾಲಿ (ಮುಸ್ಲಿಂ), ಪರಿಶಿಷ್ಟ ಜಾತಿಯಿಂದ ಮತಾಂತರ ಹೊಂದಿದ ಕ್ರಿಶ್ಚಿಯನ್ನರು ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಇತರೆ ಉಪ ಜಾತಿಗಳು) ವಿದ್ಯಾರ್ಥಿಗಳಿಗೆ ರೂ. 2.50 ಲಕ್ಷ

  1. b) ಪ್ರವರ್ಗ-2ಎ, (ಬೌದ್ಧರು ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಇತರೆ ಉಪ ಜಾತಿಗಳು) ಪ್ರವರ್ಗ-2ಬಿ (ಮುಸ್ಲಿಂ) ಮತ್ತು 3ಬಿ (ಕ್ರಿಶ್ಚಿಯನ್, ಜೈನ್) ವಿದ್ಯಾರ್ಥಿಗಳಿಗೆ ರೂ. 2.00 ಲಕ್ಷ

6)            ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಟ 5 ಕಿ.ಮೀ ದೂರದವರಾಗಿರಬೇಕು. ಆದರೆ, ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ/ಪಟ್ಟಣ ಆಗಿದ್ದಲ್ಲಿ, ಅವರು ಬೇರೆ ನಗರ/ಪಟ್ಟಣದಲ್ಲಿ ಇರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಮಾತ್ರ ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ. (ಒಂದೇ ನಗರದ ವ್ಯಾಪ್ತಿಯಲ್ಲಿ ಇರುವವರು ಅರ್ಹರಿರುವುದಿಲ್ಲ).

7)            ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳು ಇರುವ ಸ್ಥಳಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೀಸಲಿರುವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು.

8)            ವಿದ್ಯಾರ್ಥಿನಿಲಯಗಳಿಗೆ ಮಂಜೂರಾದ ಸಂಖ್ಯಾಬಲಕ್ಕೆ ತಕ್ಕಂತೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳನ್ನು ಭರ್ತಿ ಮಾಡಿ ನಂತರದ ಹೆಚ್ಚುವರಿ ಅರ್ಜಿಗಳನ್ನು ಮಾತ್ರ ವಿದ್ಯಾಸಿರಿ ಯೋಜನೆಯಡಿ ಪರಿಗಣಿಸಲಾಗುವುದು.

9)            ಈ ಯೋಜನೆಯಡಿ ಪ್ರಥಮ ಬಾರಿಗೆ ಸೌಲಭ್ಯವನ್ನು ಪಡೆಯಲು, ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು (ಯಾವುದೇ ವಿಷಯ/ವಿಷಯಗಳಲ್ಲಿ ಬ್ಯಾಕ್‍ಲಾಗ ಇದ್ದಲ್ಲಿ ಅಂತವರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.)

10)          ಈ ಯೋಜನೆಯಡಿ ಸಹಾಯಧನ ಆಯಾ ವರ್ಷಕ್ಕೆ ಲಭ್ಯವಿರುವ ಅನುದಾನ ಹಾಗೂ ಭೌತಿಕ ಗುರಿಗೆ ತಕ್ಕಂತೆ ಸ್ವೀಕೃತವಾದ ಅರ್ಹ ಅರ್ಜಿಗಳಲ್ಲಿ ಹಿಂದಿನ ವರ್ಷದ ವಾರ್ಷಿಕ/ಸೆಮಿಸ್ಟರ್ ತರಗತಿಗಳಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಇಳಿಕೆ ಕ್ರಮಾನುಸಾರ (ಆesಛಿeಟಿಜiಟಿg ಔಡಿಜeಡಿ), ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತೀರುವ ಕೋರ್ಸುಗಳ ಆಧಾರದ ಮೇಲೆ ಮಂಜೂರು ಮಾಡಲಾಗುವುದು.

11)          ಮುಕ್ತ ವಿಶ್ವವಿದ್ಯಾಲಯ/ದೂರ ಶಿಕ್ಷಣ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತೀರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

12)          ಸದರಿ ಯೋಜನೆಯಡಿ ತಪ್ಪು ಮಾಹಿತಿ ನೀಡಿ ಅಥವಾ ಸರ್ಕಾರಿ/ಖಾಸಗಿ ಅನುದಾನಿತ ವಸತಿನಿಲಯಗಳಲ್ಲಿ ಪ್ರವೇಶ ಹೊಂದಿರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆದಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು ಪಡೆದಿರುವ ಎಲ್ಲಾ ಮೊತ್ತವನ್ನು ಬಡ್ಡಿ ಸಮೇತ ವಸೂಲಿ ಮಾಡಲಾಗುವುದು.

 

ಈ ಮೇಲಿನ ಅಂಶಗಳು ಕಡ್ಡಾಯವಾಗಿದ್ದು ಅರ್ಜಿ ಸಲ್ಲಿಸುವ ಮುಂಚೆ ಹೊಂದಿರತಕ್ಕದ್ದು, ತಪ್ಪಿದಲ್ಲಿ ಅಂತಹ ವಿದ್ಯಾರ್ಥಿಗಳು ವಿದ್ಯಾಸಿರಿ ಯೋಜನೆಗೆ ಅರ್ಹರಿರುವುದಿಲ್ಲ.

 

ಅರ್ಹತೆಯುಳ್ಳ ವಿದ್ಯಾರ್ಥಿಗಳು ಸೇವಾಸಿಂಧು ಆನಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ದಿನಾಂಕ: 30.11.2021ರ ಒಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು, ಸದರಿ ದಿನಾಂಕವನ್ನು 10.01.2021ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸೇವಾಸಿಂಧು ಆನಲೈನ್ ಹೊರಡುಪಡಿಸಿ ಇನ್ನಾವುದೇ ಮಾರ್ಗದ ಮೂಲಕ ಸ್ವೀಕರಿಸಲಾಗುವುದಿಲ್ಲ. 

ಹೆಚ್ಚಿನ ಮಾಹಿತಿಗಾಗಿ

ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: ಸಿ-7 ಒಂದನೇ ಮಹಡಿ, ಜಿಲ್ಲಾಡಳಿತ ಭವನ (ಮಿನಿ ವಿಧಾನಸೌಧ) ಯಾದಗಿರಿ. – 585202 ದೂರವಾಣಿ ಸಂಖ್ಯೆ: 08473:253235

ಸೇವಾಸಿಂಧು ಆನಲೈನ್  ಲಿಂಕ್: https://sevasindhu.karnataka.gov.in

 

ಇತ್ತೀಚಿನ ನವೀಕರಣ​ : 02-03-2022 02:07 PM ಅನುಮೋದಕರು: RAJUಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಾದಗಿರಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080